ಹಾ.ಮಾ.ನಾಯಕರು 1931ರ ಸೆಪ್ಟೆಂಬರ್ 12ರಂದು ಶಿವಮೊಗ್ಗ ಜೆಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗದ್ದೆಯಲ್ಲಿ ಜನಿಸಿದರು. ಇವರ ತಂದೆ ಶ್ರೀನಿವಾಸ ನಾಯಕ ಮತ್ತು ತಾಯಿ ರುಕ್ಮಿಣಮ್ಮ. ಹಾ ಮಾ ನಾ ಎಂದೇ ಪ್ರಸಿಧ್ಧರಾಗಿದ್ದ ಹಾ.ಮಾ.ನಾಯಕರ ಪೂರ್ಣ ಹೆಸರು ಹಾರೋಗದ್ದೆ ಮಾನಪ್ಪ ನಾಯ
ಇವರು ತಮ್ಮ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಮೇಗರವಳ್ಳಿ ಮತ್ತು ತೀರ್ಥಹಳ್ಳಿಯಲ್ಲಿ ಮುಗಿಸಿದರು. ನಂತರ ಶಿವಮೊಗ್ಗದಲ್ಲಿ ಇಂಟರ್ ಮುಗಿಸಿದರು, ಮೈಸೂರು ಮಹರಾಜಾ ಕಾಲೇಜಿನಲ್ಲಿ ಬಿ.ಎ. ಆನರ್ಸ್ ಗಳಿಸಿದ ನಂತರ ಅವರು ತುಮಕೂರು, ಶಿವಮೊಗ್ಗದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.
1961ರಲ್ಲಿ ಮೈಸೂರು ವಿಶ್ವವಿದ್ಯಾ ಲಯ ಸೇರಿದರು, ಮೈಸೂರು ವಿಶ್ವವಿದ್ಯಾನಿಲಯದ ವ್ಯಾಸಂಗ ವೇತನ ಪಡೆದು, ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞ್ನಾನದಲ್ಲಿ ಎಂ.ಎ. ಸ್ನಾತಕೋತ್ತರ ಪಡೆದರು. ನಂತರ ಫುಲ್‍ಬ್ರೈಟ್ ವಿದ್ಯಾರ್ಥಿ ವೇತನ ಪಡೆದು, ಕನ್ನಡ ಸಾಹಿತ್ಯ ಮತ್ತು ಆಡು ಭಾಷೆ ಎಂಬ ಮಹಾ ಪ್ರಬಂಧವನ್ನು ಸಾದರ ಪಡಿಸಿ, ಅಮೆರಿಕಾದ ಇಂಡಿಯಾನಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದರು.
ಸಂಚಯ, ಸಂಪ್ರತಿ, ಸಂಪದ, ಸಾಹಿತ್ಯ ಸಲ್ಲಾಪ, ಸಂಪುಟ, ಸೂಲಂಗಿ, ಕನ್ನಡ ಸಾಹಿತ್ಯ ಚರಿತ್ರೆ ಮುಂತಾದ 60 ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅಂಕಣ ಬರೆಯುವ ಮೂಲಕ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು. ಅಂಕಣ ಸಾಹಿತ್ಯ ವಿಭಾಗದಲ್ಲಿ ಮೊದಲ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಹೆಗ್ಗಳಿಕೆ ಅವರದು. ರಾಜ್ಯೋತ್ಸವ ಹಾಗೂ ಪಂಪ ಪ್ರಶಸ್ತಿಗಳೂ ಹಾ.ಮಾ.ನಾಯಕರಿಗೆ ಸಂದಿವೆ.
ಹಾಮಾನಾ ಅವರು ಹೃದಯಾಘಾತದಿಂದ 2000ನೆಯ ಇಸವಿ, ನವೆಂಬರ್ 11ರಂದು ಮೈಸೂರಿನಲ್ಲಿ ನಿಧನ ಹೊಂದಿದರು.